ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ
ಕಾಣದೆ ನಿಲ್ಲಲಾರೆನೆ||ಪಲ್ಲವಿ||

ಕಾಣುತ ಭಕ್ತರ ಕರುಣದಿ ಸಲಹುವ
ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ||

ಬಂದೆನೆ ಬಹಳ ದೂರದಿ ಭವಸಾಗರ ತರಣಿ
ನಿಂದೆನೆ ನಿನ್ನ ತೀರದಿ
ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ಮಂದಗಮನೆ ಎನ್ನ ಮುಂದಕೆ ಕರೆಯೆ ||೧||

ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು
ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ
ಸ್ಮರನ ಪಿತ ಮುರಹರನ ಕರುಣದಿ ||೨||

ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ
ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ
ಪದ ರಜವ ತೋರಿಸೆ ಮದಗಜಗಮನೆ ||೩||

4 thoughts on “ವೇಣಿ ಮಾಧವನ ತೋರಿಸೆ – ವಾದಿರಾಜರು”

  1. ವಾದಿರಾಜರ ಸೊಗಸಾದ ಕೀರ್ತನೆಯನ್ನು ವಿದ್ಯಾದಿಭೂಷಣರು ಸೊಗಸಾಗಿ ಹಾಡಿದ್ದಾರೆ. ಕೇಳಿಸಿದ್ದಕ್ಕಾಗಿ ಧನ್ಯವಾದಗಳು.

  2. ವಾದಿರಾಜರ ಮೇರು ಪ್ರತಿಭೆಗೆ ಸಾಕ್ಷಿ:
    ‘ಜಾಣೆ ತ್ರಿವೇಣಿ ಸಾರೆ ಸುಖವಾಣಿ’ ಅಲ್ಲವೇ.

Leave a Reply to ಈಶ್ವರ ಭಟ್ Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.