ರಚನೆ : ಕನಕದಾಸರು

ಆರು ಬಾಳಿದರೇನು ಆರು ಬದುಕಿದರೇನು
ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ||

ಉಣ್ಣಬರದವರಲ್ಲಿ ಊರೂಟವಾದರೇನು
ಹಣ್ಣು ಬಿಡದ ಮರ ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||೧||

ಅಕ್ಕರಿಲ್ಲದವರಿಗೆ ಮಕ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||೨||

ಅಲ್ಪದೊರೆಗಳ ಜೀತ ಎಷ್ಟು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿ ಕೇಶವನ
ಆಲ್ಪವೂ ನೆನೆಯದ ನರನಿದ್ದರೇನು ||೩||

*******

ಡಾ. ರಾಜ್‌ಕುಮಾರ್ ಅವರ ದನಿಯಲ್ಲಿ ಈ ಹಾಡು ಕೇಳಿ :-

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.