ರಚನೆ: ಪುರಂದರದಾಸರು
ಆದದ್ದೆಲ್ಲ ಒಳಿತೇ ಆಯಿತು
ನಮ್ಮ ಶ್ರೀಧರನ ಸೇವೆ ಮಾಡಲು
ಸಾಧನ ಸಂಪತ್ತಾಯಿತು||ಪ||
ದಂಡಿಗೆ ಬೆತ್ತ ಹಿಡಿಯೊದಕ್ಕೆ
ಮಂಡೆ ಬಾಗಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ || ೧ ||
ಗೋಪಾಳ ಬುಟ್ಟಿ ಹಿಡಿಯೊದಕ್ಕೆ
ಭೂಪತಿಯಂತೆ ಗರ್ವಿಸುತಿದ್ದೆ
ಆ ಪತ್ನೀ ಕುಲ ಸಾವಿರವಾಗಲಿ
ಗೋಪಾಳ ಬುಟ್ಟಿ ಹಿಡಿಸಿದಳಯ್ಯ || ೨ ||
ತುಳಸಿ ಮಾಲೆ ಹಾಕುವುದಕ್ಕೆ
ಅರಸನಂತೆ ನಾಚುತಲಿದ್ದೆ
ಸರಸಿಜಾಕ್ಷ ಶ್ರೀ ಪುರಂದರ ವಿಠ್ಠಲನು
ತುಳಸಿ ಮಾಲೆ ಹಾಕಿಸಿದನಯ್ಯ ||೩||
*********************************