ಧವಳಗಂಗೆಯ ಗಂಗಾಧರ ಮಹಾಲಿಂಗ

ರಚನೆ : ವಾದಿರಾಜರು

ಧವಳಗಂಗೆಯ ಗಂಗಾಧರ ಮಹಾಲಿಂಗ
ಮಾಧವನ ತೋರಿಸಯ್ಯ ಗುರುಕುಲೋತ್ತುಂಗ || ಪ ||

ಅರ್ಚಿಸಿದವರಿಗಭೀಷ್ಟವ ಕೊಡುವ
ಹೆಚ್ಚಿದ ಅಘಗಳ ತರಿದು ಬಿಸುಟುವ
ದುಶ್ಚರಿತಗಳೆಲ್ಲ ದೂರದಲ್ಲಿಡುವ
ನಮ್ಮಚ್ಯುತಗಲ್ಲದ ಅಸುರರ ಬಡಿವ || ೧ ||

ಮಾರನ ಗೆದ್ದ ಮನೋಹರ ಮೂರ್ತಿ
ಸಾರ ಸಜ್ಜನರಿಗೆ ಸುರಚಕ್ರವರ್ತಿ
ಧಾರುಣಿಯೊಳಗೆ ತುಂಬಿದೆ ನಿನ್ನ ಕೀರ್ತಿ
ಮುರಾರಿಯ ತೋರಿಸಯ್ಯ ನಿನಗೆ ಶರಣಾರ್ಥಿ || ೨ ||

ಚೆನ್ನಪ್ರಸನ್ನ ಶ್ರೀ ಹಯವದನನ್ನ
ಅನುದಿನ ನೆನೆವಂತೆ ಮಾಡೊ ನೀಯೆನ್ನ
ಅನ್ಯನಲ್ಲವೊ ನೀನು ಗುರುವೆಂಬೆ ನಿನ್ನ
ಇನ್ನಾದರೂ ಹರಿಯ ತೋರೊ ಧೀರಮುಕ್ಕಣ್ಣ || ೩ ||

1 thought on “ಧವಳಗಂಗೆಯ ಗಂಗಾಧರ ಮಹಾಲಿಂಗ”

  1. RK says:

    ಃ) ಃ)

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Related Posts

ವೇಣಿ ಮಾಧವನ ತೋರಿಸೆ – ವಾದಿರಾಜರುವೇಣಿ ಮಾಧವನ ತೋರಿಸೆ – ವಾದಿರಾಜರು

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ ಮಂದಗಮನೆ ಎನ್ನ

ಆನಂದಮಯಗೆ ಚಿನ್ಮಯಗೆ – ವಾದಿರಾಜರುಆನಂದಮಯಗೆ ಚಿನ್ಮಯಗೆ – ವಾದಿರಾಜರು

ರಚನೆ :- ವಾದಿರಾಜರು ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ|| ವೇದವ ತಂದು ಬೆಟ್ಟವ ಪೊತ್ತು ಧರಣಿಯ ಸಾಧಿಸಿ ಕಂಭದಿ ಬಂದವಗೆ| ಭೂದಾನವ ಬೇಡಿ ನೃಪರ ಸಂಹರಿಸಿದ ಆದಿಮೂರುತಿಗೆ ಆರತಿ ಎತ್ತಿರೆ|| ಇಂದುವದನೆ ಕೂಡಿ ಅಡವಿಯ ಚರಿಸಿ ನಂದಗೋಕುಲದಿ ನಲಿದವಗೆ| ಮಂದಗಮನೆಯರ

ತಾಳುವಿಕೆಗಿಂತ ತಪವು ಇಲ್ಲತಾಳುವಿಕೆಗಿಂತ ತಪವು ಇಲ್ಲ

ರಚನೆ : ವಾದಿರಾಜರು ವಿದ್ಯಾಭೂಷಣರ ದನಿಯಲ್ಲಿ ತಾಳುವಿಕೆಗಿಂತನ್ಯ ತಪವು ಇಲ್ಲ ಕೇಳಬಲ್ಲವರಿಂಗೆ ಪೇಳುವೆನು ಸೊಲ್ಲ ||ಪಲ್ಲವಿ|| ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು ನೆಟ್ಟಸಸಿ ಫಲಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ