ಯಾವ ಜನ್ಮದ ಮೈತ್ರಿ – Yava Janmada maitri – kuvempu

ರಚನೆ – ಕುವೆಂಪು
ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು
ನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ !

ಎಲ್ಲಿದ್ದರೇನಂತೆ ನಿನ್ನನೊಲಿಯದೆ ಮಾಣೆ,
ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು!
ವಿಶ್ವ ಜೀವನವೊಂದು ಪಾರವಿಲ್ಲದ ಸಿಂಧು!
ಮೇಲೆ ತೆರೆನೊರೆಯೆದ್ದು ಭೋರ್ಗರೆಯುತಿರೆ ರೇಗಿ,
ಅದರಂತರಾಳದಲಿ ಗುಪ್ತಗಾಮಿನಿಯಾಗಿ;

ಹೃದಯಗಳು ನಲಿಯುತಿವೆ ಪ್ರೇಮ ತೀರ್ಥದಿ ಮಿಂದು!
ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ;
ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ?
ಕುರುಡನಾದಗೆ ದಾರಿಯರ್ಥ ತಿಳಿಯಲೆ ಬೇಕೆ?

ಹಾದಿ ಸಾಗಿದರಾಯ್ತು ಬರುವುದೆಲ್ಲಾ ಬರಲಿ!
ಬಾರಯ್ಯ, ಮಮಬಂಧು, ಜೀವನಪಥದೊಳಾವು
ಒಂದಾಗಿ ಮುಂದುವರಿಯುವ; ಹಿಂದಿರಲಿ ಸಾವು.

1 thought on “ಯಾವ ಜನ್ಮದ ಮೈತ್ರಿ – Yava Janmada maitri – kuvempu”

  1. ಸೊಗಸಾದ ಹಾಡುಗಾರಿಕೆ. ಧನ್ಯವಾದಗಳು, ಮೇಡಮ್.

Leave a Reply to Sudhindra Deshpande Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.

Related Posts

ಶಾನುಭೋಗರ ಮಗಳು – ಕೆ.ಎಸ್.ನರಸಿಂಹಸ್ವಾಮಿಶಾನುಭೋಗರ ಮಗಳು – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕ – ಜಿ.ವಿ.ಅತ್ರಿ ಸಂಗೀತ – ಸಿ.ಅಶ್ವಥ್ ಹಾಡು ಕೇಳಿ  ಶಾನುಭೋಗರ ಮಗಳು ತಾಯಿಯಿಲ್ಲದ ಹುಡುಗಿ ರತ್ನದಂತಹ ಹುಡುಗಿ ಊರಿಗೆಲ್ಲ ಬಲು ಜಾಣೆ ಗಂಭೀರೆ ಹೆಸರು ಸೀತಾದೇವಿ ಹನ್ನೆರಡು ತುಂಬಿಹುದು ಮದುವೆಯಿಲ್ಲ | ತಾಯಿಯಿಲ್ಲದ ಹೆಣ್ಣು ಮಿಂಚ

ಸ್ತ್ರೀ – ಜಿ.ಎಸ್.ಶಿವರುದ್ರಪ್ಪಸ್ತ್ರೀ – ಜಿ.ಎಸ್.ಶಿವರುದ್ರಪ್ಪ

ಕವಿ – ಜಿ.ಎಸ್.ಶಿವರುದ್ರಪ್ಪ ಗಾಯಕ – ಸಿ. ಅಶ್ವಥ್ ಹಾಡು ಕೇಳಿ ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರೆ ಅಷ್ಟೇ ಸಾಕೆ? ಹಸುರನುಟ್ಟ ಬೆಟ್ಟಗಳಲಿ ಮೊಲೆಹಾಲಿನ ಹೊಳೆಯನಿಳಿಸಿ ಬಯಲ ಹಸುರ

ಕನಸಿನೊಳಗೊಂದು ಕಣಸು – ಅಂಬಿಕಾತನಯದತ್ತಕನಸಿನೊಳಗೊಂದು ಕಣಸು – ಅಂಬಿಕಾತನಯದತ್ತ

ಕವನ -ಕನಸಿನೊಳಗೊಂದು ಕಣಸುಕವಿ – ದ.ರಾ.ಬೇಂದ್ರೆ(ಅಂಬಿಕಾತನಯದತ್ತ)          ತಾಯಿ ಮಕ್ಕಳ ಸಂವಾದ(ಈಗಿನ ಕನ್ನಡ ನಾಡಿನ ಮತ್ತು ಕನ್ನಡಿಗರ ಸ್ಥಿತಿಯ ಚಿತ್ರ) “ಯಾರು ನಿಂದವರಲ್ಲಿ ತಾಯೆ” ಎಂದೆ  “ಯಾರು ಕೇಳುವರೆನಗೆ, ಯಾಕೆ ತಂದೆ ?” “ಬೇಸರದ ದನಿಯೇಕೆ ಹೆಸರ ಹೇಳಲ್ಲ”  “ಹೆಸರಾಗಿಯೂ ಕೂಡ ಹೇಳ ಹೆಸರಿಲ್ಲ”