ಸುಲಿದ ಬಾಳೆಯ ಹಣ್ಣಿನಂದದಿ
ಕಳೆದ ಸಿಗುರಿನ ಕಬ್ಬಿನಂದದಿ
ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರುವ ಈ
ಲಲಿತವಹ ಕನ್ನಡ ನುಡಿಯಲಿ
ತಿಳಿದು ತನ್ನಲಿ ತನ್ನ ಮೋಕ್ಷವ
ಗಳಿಸಿಕೊಂಡರೆ ಸಾಲದೆ? ಸಂಸ್ಕೃತದಲಿನ್ನೇನು?
* * *
ಸುಲಿದ ಬಾಳೆಯ ಹಣ್ಣಿನಂದದಿ
ಕಳೆದ ಸಿಗುರಿನ ಕಬ್ಬಿನಂದದಿ
ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರುವ ಈ
ಲಲಿತವಹ ಕನ್ನಡ ನುಡಿಯಲಿ
ತಿಳಿದು ತನ್ನಲಿ ತನ್ನ ಮೋಕ್ಷವ
ಗಳಿಸಿಕೊಂಡರೆ ಸಾಲದೆ? ಸಂಸ್ಕೃತದಲಿನ್ನೇನು?
* * *
ಕನ್ನಡದ ನೆಲದ ಪುಲ್ಲೆನಗೆ ಪಾವನ ತುಳಸಿ!
ಕನ್ನಡದ ನೆಲದ ನೀರ್ವೊನಲೆನಗೆ ದೇವನದಿ!
ಕನ್ನಡದ ನೆಲದ ಕಲ್ಲೆಮಗೆ ಶಾಲಗ್ರಾಮ ಶಿಲೆ! ಕನ್ನಡಂ ದೈವಮೈ!
ಕನ್ನಡದ ಶಬ್ದಮೆಮಗೋಂಕಾರಮೀಯೆನ್ನ
ಕನ್ನಡದ ನುಡಿಯೆ ಗಾಯತ್ರಿಯದ್ಭುತ ಮಂತ್ರ-
ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ ಜಗದೊಳಗೆ?
* *
ಕೃಪೆ: ದಟ್ಸ್ ಕನ್ನಡ