ಸಂನ್ಯಾಸಿ ಗೀತೆ – ಕುವೆಂಪು

ಸಂನ್ಯಾಸಿ ಗೀತೆ ಏಳು, ಮೇಲೇಳೇಳು ಸಾಧುವೆ, ಹಾಡು ಚಾಗಿಯ ಹಾಡನು; ಹಾಡಿನಿಂದೆಚ್ಚರಿಸು ಮಲಗಿಹ ನಮ್ಮ ಈ ತಾಯ್ನಾಡನು! ದೂರದಡವಿಯೊಳೆಲ್ಲಿ ಲೌಕಿಕವಿಷಯವಾಸನೆ ಮುಟ್ಟದೊ, ಎಲ್ಲಿ ಗಿರಿಗುಹೆಕಂದರದ ಬಳಿ ಜಗದ ಗಲಿಬಿಲಿ ತಟ್ಟದೊ, ಎಲ್ಲಿ ಕಾಮವು ಸುಳಿಯದೊ,-ಮೇಣ್ ಎಲ್ಲಿ ಜೀವವು ತಿಳಿಯದೊ ಕೀರ್ತಿ ಕಾಂಚನವೆಂಬುವಾಸೆಗಳಿಂದ ಜನಿಸುವ ಭ್ರಾಂತಿಯ, ಎಲ್ಲಿ ಆತ್ಮವು ಪಡೆದು ನಲಿವುದೊ ನಿಚ್ಚವಾಗಿಹ ಶಾಂತಿಯ, ನನ್ನಿಯರಿವಾನಂದವಾಹಿನಿಯಲ್ಲಿ ಸಂತತ Read More