ಕವಿ – ಎಚ್. ಎಸ್. ವೆಂಕಟೇಶಮೂರ್ತಿ
ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು
ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು
ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ
ಯಾರೋ ಮೋಹನ ಯಾವ ರಾಧೆಗೊ ಪಡುತಿರುವನು ಪರಿತಾಪ
ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ
ಧಾವಿಸಿ ಸೇರಲು ಬೃಂದಾವನವ ರಾಧೆ ತೋರುವಳು ದಾರಿ
ಮಹಾ ಪ್ರವಾಹ ತಡೆಯುವರಿಲ್ಲ ಪಾತ್ರವಿರದ ತೊರೆ ಪ್ರೀತಿ
ತೊರೆದರು ತನ್ನ ತೊರೆಯದು ಪ್ರಿಯನ ರಾಧೆಯ ಪ್ರೀತಿಯ ರೀತಿಯಿದು