ಗುರುಪದ ಹಾರ

ಗುರುಪದ ಹಾರ ಧರೆಯೋದ್ಧಾರಕೆ ಮೆರೆವರು ಗುರುಗಳು ವರಮಂತ್ರಾಲಯದಲ್ಲಿ ವರಪ್ರಹ್ಲಾದರು ವ್ಯಾಸ ಪ್ರಭುಗಳು ವರ ತುಂಗಾ ತಟದಲ್ಲಿ |೧| ಕೊರೆದಿಹ ಕಂಬದಿ ಹರಿಯನು ತೋರಿಸಿ ಹರಿನಾಮವ ಜಗದಲ್ಲಿ ಮೆರೆಸಿದ ವರಪ್ರಹ್ಲಾದರು ಮೆರವರು ವರಮಂತ್ರಾಲಯದಲ್ಲಿ |೨| ಹರಿಮತ ಸಾರುವ ಹರಿಪದ ಹಾರವ ಪರಿ ಪರಿ ವಿಧಪದದಲ್ಲಿ ಇಳೆಯೊಳು ಸಾರಿದ ವ್ಯಾಸರು ಮೆರೆವರು ವರಮಂತ್ರಾಲಯದಲ್ಲಿ |೩| ಧರೆಯನು ಮುಸುಕಿದ ತಮವನು Read More

ರಾಮನ ನೋಡಿರೈ, ನಿಮ್ಮಯ ಕಾಮಿತ ಬೇಡಿರೈ

ಜಗನ್ನಾಥದಾಸರ ರಚನೆ ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ || ಪ || ತಾಮರಸಸಖ ಸುವಂಶಾಬ್ಧಿಶರತ್ಸೋಮಾ ಕಮಲಧೀಮ ||ಅ.ಪ.|| ಧಾತನನುಜ್ಞದಿ ದೇವತ್ವಷ್ಟ್ರ ನಿರ್ಮಿಸಿದಾ ಅಜ ಪೂಜಿಸಿದಾ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ || ೧  || ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ Read More

ಹರಿಕಥಾಮೃತಸಾರ – ಸರ್ವಪ್ರತೀಕ ಸಂಧಿ -10

 ಶ್ರೀ ಜಗನ್ನಾಥದಾಸ ವಿರಚಿತ   ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು// ಆವ ಪರಬೊಮ್ಮನ ಅತಿವಿಮಲ ಅಂಗಾವ ಬದ್ಧರು ಎಂದೆನಿಪ ರಾಜೀವಭವ ಮೊದಲಾದ ಅಮರರು ಅನುದಿನದಿ ಹರಿಪದವ ಸೇವಿಪರಿಗೆ ಅನುಕೂಲರಲ್ಲದೆ ತಾವು ಇವರನು ಕೆಡಿಸಬಲ್ಲರೆ ಶ್ರೀವಿಲಾಸಾಸ್ಪದನ ದಾಸರಿಗೆ ಉಂಟೆ ಅಪಜಯವು//1// ಶ್ರೀದನ ಅಂಘ್ರಿ ಸರೋಜಯುಗಳ ಏಕಾದಶ ಸ್ಥಾನ ಆತ್ಮದೊಳಗಿಟ್ಟು ಆದರದಿ ಸಂತುತಿಸಿ ಹಿಗ್ಗುವರಿಗೆ Read More

ಕೃಷ್ಣಪಕ್ಷದ ಮಧ್ಯರಾತ್ರಿ – ಅಂಬಿಕಾತನಯದತ್ತ

೧ ‘-ಹಿಂದೆ ಎಂದೋ ಒಮ್ಮೆ ಇಂದಿನೀ ರಾತ್ರಿ ಕೃಷ್ಣ ಹುಟ್ಟಿದನಂತೆ – ಕೃಷ್ಣ ಹುಟ್ಟಿದನು. ಮುಂದೆ ಎಂದೋ ಒಮ್ಮೆ ತಾ ಬರುವ ಖಾತ್ರಿ ಕೃಷ್ಣ ಹೇಳಿದನಂತೆ ; ಪಾರ್ಥ ಕೇಳಿದನು : ೨ “ಬಾಡಿರಲು ಬತ್ತಿರಲು ಧರ್ಮವು ; ಅಧರ್ಮ ಮೊಳೆತಿರಲು ಚಿಗಿತಿರಲು ನಾ ಬರುವೆನೆಂ”ದು. ಆಡಿದನು ಮಾಡಿಲ್ಲ. ಯಾರದೀ ಕರ್ಮ? ಇನ್ನಾದರೂ ಅವನು ಬರುವುದೆಂದು? Read More

ಬಾರೋ ಗುರು ರಾಘವೇ೦ದ್ರ ಬಾರಯ್ಯ ಬಾ ಬಾ

ರಚನೆ : ಶೇಷ ವಿಠಲ ಬಾರೋ ಗುರು ರಾಘವೇ೦ದ್ರ ಬಾರಯ್ಯ ಬಾ ಬಾ ಬಾರೋ ಗುರು ರಾಘವೇಂದ್ರ ||ಪ|| ಹಿಂದುಮು೦ದಿಲ್ಲೆನಗೆ ನೀ ಗತಿ ಎ೦ದು ನ೦ಬಿದೆ ನಿನ್ನ ಪಾದವ ಬ೦ಧನವ ಬಿಡಿಸೆನ್ನ ಕರಪಿಡಿ ನ೦ದಕ೦ದ ಮುಕು೦ದ ಬ೦ಧೊ |ಅ.ಪ| ಸೇವಕನೆಲೊ ನಾನು ಧಾವಿಸಿ ಬ೦ದೆನು ಸೇವೆ ನೀಡೆಲೊ ನೀನು ಸೇವಕನ ಸೇವೆಯನು ಸೇವಿಸಿ ಸೇವ್ಯ ಸೇವಕ Read More