ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ
ರಚನೆ : ಪುರಂದರದಾಸರು ವಿದ್ಯಾಭೂಷಣರ ದನಿಯಲ್ಲಿ ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ ||ಪಲ್ಲವಿ|| ಸುಂದರ ಮೃಗಧರ ಪಿನಾಕಧನುಕರ ಗಂಗಾಶಿರ ಗಜಚರ್ಮಾಂಬರಧರ ||ಅನು|| ನಂದಿವಾಹನಾನಂದದಿ೦ದ ಮೂರ್ಜಗದಿ ಮೆರೆವನು ನೀನೆ ಅಂದು ಅಮೃತಘಟದಿಂದುದಿಸಿದ ವಿಷತ೦ದು ಭುಜಿಸಿದವ ನೀನೆ ಕಂದರ್ಪನ ಕ್ರೋಧದಿ೦ದ ಕಣ್ತೆರೆದು ಕೊಂದ ಉಗ್ರನು ನೀನೆ ಇಂದಿರೇಶ ಶ್ರೀರಾಮನ ನಾಮವ ಚಂದದಿ ಪೊಗಳುವ ನೀನೆ Read More