ಮಾತು – ಚೆನ್ನವೀರ ಕಣವಿ
ಕವಿ : ಚೆನ್ನವೀರ ಕಣವಿ ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ ಪಾರಿಜಾತವು ಹೂವು ಸುರಿಸಿದಂತೆ, ಮುಟ್ಟಿದರೆ ಮಾಸುತಿಹ ಮಂಜುಹನಿ ಮುತ್ತಿನಲಿ ಸೃಷ್ಟಿ ಸಂಪೂರ್ಣತೆಯ ಬಿಂಬಿಪಂತೆ ; ಮೆಲ್ಲೆದೆಯ ಸವಿಯೊಲುಮೆ ಕರಗಿ ಕಂಬನಿಯಾಗಿ ಹೆಣ್ಣ ಕಣ್ಣಂಚಿನಲಿ ತುಳುಕುವಂತೆ, ಸುಳಿಗಾಳಿಯೊಂದಿನಿತು ಸೂಸಿ ಬಂದರೂ ಸಾಕು; ಮರವನಪ್ಪಿದ ಬಳ್ಳಿ ಬಳುಕುವಂತೆ ; ನಾವು ಆಡುವ ಮಾತು ಹೀಗಿರಲಿ ಗೆಳೆಯ, ಮೃದುವಚನ Read More