ಶಾನುಭೋಗರ ಮಗಳು – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕ – ಜಿ.ವಿ.ಅತ್ರಿ ಸಂಗೀತ – ಸಿ.ಅಶ್ವಥ್ ಹಾಡು ಕೇಳಿ  ಶಾನುಭೋಗರ ಮಗಳು ತಾಯಿಯಿಲ್ಲದ ಹುಡುಗಿ ರತ್ನದಂತಹ ಹುಡುಗಿ ಊರಿಗೆಲ್ಲ ಬಲು ಜಾಣೆ ಗಂಭೀರೆ ಹೆಸರು ಸೀತಾದೇವಿ ಹನ್ನೆರಡು ತುಂಬಿಹುದು ಮದುವೆಯಿಲ್ಲ | ತಾಯಿಯಿಲ್ಲದ ಹೆಣ್ಣು ಮಿಂಚ ಬೀರುವ ಕಣ್ಣು ಒಮ್ಮೊಮ್ಮೆ ಕಣ್ಣೀರ ಸರಸಿಯಹುದು ತಾಯಿಯಂದದಿ ಬಂದು ತಂಪನೆರೆಯುವುದೆಂದು ಇಂಥ ಬಾಳಿಗೆ Read More

ತಿಂಗಳಾಯಿತೇ? – ಕೆ.ಎಸ್.ನರಸಿಂಹಸ್ವಾಮಿ

ಕವನ – ತಿಂಗಳಾಯಿತೇ? ಕವಿ – ಕೆ.ಎಸ್.ನರಸಿಂಹಸ್ವಾಮಿ ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ | ಇನ್ನೆಂದು ಬರುವಿರೆಂದೆನ್ನ ಕೇಳಿದಳು ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು || ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ ಕಣ್ಣಿರಲು ತಿಳಿಬಾನ ಕಿರುತಾರೆಯಂತೆ | ವೇಣಿಯಿರಲು ವಸಂತ ಪುಷ್ಪವನದಂತೆ ಮನಸು ಬಾರದು ನನಗೆ ಅಡಿಯನಿಡೆ ಮುಂದೆ Read More

ಮಲ್ಲಿಗೆ ಕವಿಯ ಸವಿ ನೆನಪಲ್ಲಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಹಾಡು ಕೇಳಿ  ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚಂದ್ರಮುಖಿ ನೀನೆನಲು ತಪ್ಪೇನೆ? ನಿನ್ನ ಸೌಜನ್ಯವೇ ದಾರಿ ನೆರಳಾಗಿರಲು ನಿತ್ಯ ಸುಖಿ ನೀನೆನಲು ಒಪ್ಪೇನೆ? ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ ಚೆಲ್ಲಿ ಸೂಸುವ ಅಮೃತ ನೀನೇನೆ ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ ಸಿದ್ಧಿಸುವ ಧನ್ಯತೆಯು ನೀನೇನೆ ನಿನ್ನ ಕಿರುನಗೆಯಿಂದ ನಗೆಯಿಂದ ನುಡಿಯಿಂದ ಎತ್ತರದ ಮನೆ Read More

ಆಸೆ – ಕೆ.ಎಸ್.ನ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕಿ – ಎಸ್.ಜಾನಕಿ ಸಂಗೀತ – ಸಿ.ಅಶ್ವಥ್           ಹಾಡು ಕೇಳಿ ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ Read More

ಇಕ್ಕಳ – ಕೆ.ಎಸ್.ನರಸಿಂಹಸ್ವಾಮಿ

ರಚನೆ: ಕೆ.ಎಸ್. ನರಸಿಂಹಸ್ವಾಮಿ       ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು ಬಂತಲ್ಲ ಬೇಸಿಗೆ, ‘ಕೆಟ್ಟಬಿಸಿಲ್ ‘ ಎಂದರು ಮಳೆ ಬಿತ್ತೊ, ‘ಬಿಡದಲ್ಲ ಶನಿ!’ ಎಂಬ ಟೀಕೆ ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ! ಚಿಗುರ ಚಿನ್ನದ ನಡುವೆ ಹೂವ ಬಯಸುವರು ಹೂಗಳ ಕಾಲದಲ್ಲಿ ಹಣ್ಣ ಹೊಗಳುವರು; ‘ಹಣ್ಣಿನ ಗಾತ್ರ ಪೀಚು’ ಎಂದಿವರ ಟೀಕೆ ಇವರು ಮೆಚ್ಚುವ ವಸ್ತು Read More