ಗಾನಜೀವನೆ – ಡಿವಿಜಿ

ಕವಿ – ಡಿವಿಜಿ -ಅಂತಃಪುರ ಗೀತೆಗಳು ಗಾಯಕಿ: ಅಶ್ವಿನಿ ಸಂಗೀತ – ವಿಶ್ವೇಶ್ ಭಟ್ ಆಲ್ಬಮ್ – ಘಮ ಘಮ ಹಾಡು ಕೇಳಿ ಆವ ರಾಗವ ಪಾಡುವೇ – ಓ ಚೆಲುವೇ ಎನ್ನೊಲವೇ ಬಾಳ್ಗೆಲವೇ – ನೀನಾವ – ರಾಗವ ಪಾಡುವೇ|| ಪ|| ಆವರಾಗವ ಪಾಡಿ – ಆವ ಮಾಟವ ಮಾಡಿ | ಆವ ಜೀವವ Read More

ತಿಳಿಮುಗಿಲ ತೊಟ್ಟಿಲಲಿ – ಎಸ್.ವಿ.ಪರಮೇಶ್ವರ ಭಟ್ಟ

ಸಾಹಿತ್ಯ: ಎಸ್.ವಿ.ಪರಮೇಶ್ವರ ಭಟ್ಟ ಸಂಗೀತ: ಸಿ. ಅಶ್ವಥ್ ಗಾಯಕ: ಡಾ. ರಾಜ್‍ಕುಮಾರ್ ಹಾಡು ಕೇಳಿ ತಿಳಿಮುಗಿಲ ತೊಟ್ಟಿಲಲಿ ಮಲಗಿದ್ದ ಚಂದಿರನ ಗಾಳಿ ಜೋಗುಳ ಹಾಡಿ ತೂಗುತಿತ್ತು | ಗರಿಮುದುರಿ ಮಲಗಿದ್ದ ಹಕ್ಕಿ ಗೂಡುಗಳಲ್ಲಿ ಇರುಳು ಹೊಂಗನಸೂಡಿ ಸಾಗುತಿತ್ತು| ಮುಗುಳಿರುವ ಹೊದರಿನಲಿ ನರುಗಂಪಿನುದರದಲಿ ಜೇನುಗನಸಿನ ಹಾಡು ಕೇಳುತಿತ್ತು | ತುಂಬು ನೀರಿನ ಹೊಳೆಯೊಳ್ ಅಂಬಿಗನ ಕಿರುದೋಣಿ ಪ್ರಸ್ಥಾನ Read More

ಸಂಜೆಗೆನ್ನ ಪಯಣ – ಕೆ.ಎಸ್.ನರಸಿಂಹಸ್ವಾಮಿ

ಕವಿ – ಕೆ.ಎಸ್.ನರಸಿಂಹಸ್ವಾಮಿ ಗಾಯಕ – ಡಾ.ರಾಜ್‍ಕುಮಾರ್ ಸಂಗೀತ – ಸಿ.ಅಶ್ವಥ್ ಹಾಡು ಕೇಳಿ ಸಂಜೆಗೆನ್ನ ಪಯಣವೆಂದು ತಿಳಿದಳೆನ್ನ ಸುಂದರಿ ನನ್ನ ಮುಂದೆ ಬಂದು ನಿಂದು ತಡೆದಳಿಂತು ವಿನಯದಿ | ಕೆಂಪು ತುಟಿಗಳಿಂದ ಹರಸಿ ನುಡಿಯಲಿಲ್ಲ ನಿಜವನು ತೆರೆದ ಕಂಗಳುದಕ ಸುರಿಸಿ ತೊಳೆದುವೆನ್ನ ಮನವನು ಕಣ್ಣ ಹನಿಯು ಮಣಿಯ ತೆರದಿ ಕಣ್ಣಿನೊಡವೆ ಆಯಿತು ತುಟಿಗೆ ಬಂದ Read More

ಮಾತು – ಚೆನ್ನವೀರ ಕಣವಿ

ಕವಿ : ಚೆನ್ನವೀರ ಕಣವಿ ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ ಪಾರಿಜಾತವು ಹೂವು ಸುರಿಸಿದಂತೆ, ಮುಟ್ಟಿದರೆ ಮಾಸುತಿಹ ಮಂಜುಹನಿ ಮುತ್ತಿನಲಿ ಸೃಷ್ಟಿ ಸಂಪೂರ್ಣತೆಯ ಬಿಂಬಿಪಂತೆ ; ಮೆಲ್ಲೆದೆಯ ಸವಿಯೊಲುಮೆ ಕರಗಿ ಕಂಬನಿಯಾಗಿ ಹೆಣ್ಣ ಕಣ್ಣಂಚಿನಲಿ ತುಳುಕುವಂತೆ, ಸುಳಿಗಾಳಿಯೊಂದಿನಿತು ಸೂಸಿ ಬಂದರೂ ಸಾಕು; ಮರವನಪ್ಪಿದ ಬಳ್ಳಿ ಬಳುಕುವಂತೆ ; ನಾವು ಆಡುವ ಮಾತು ಹೀಗಿರಲಿ ಗೆಳೆಯ, ಮೃದುವಚನ Read More

ಲೋಕದ ಕಣ್ಣು – ಎಚ್. ಎಸ್. ವೆಂಕಟೇಶಮೂರ್ತಿ

ಕವಿ : ಎಚ್. ಎಸ್. ವೆಂಕಟೇಶಮೂರ್ತಿ ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆ ಒಂದು ಹೆಣ್ಣು ನನಗೋ ಆಕೆ ಕೃಷ್ಣನ ತೋರುವ ಪ್ರೀತಿಯು ನೀಡಿದ ಕಣ್ಣು ತಿಂಗಳ ರಾತ್ರಿ ತೊರೆಯ ಸಮೀಪ ಉರಿದರೆ ಯಾವುದೋ ದೀಪ ಯಾರೋ ಮೋಹನ ಯಾವ ರಾಧೆಗೋ ಪಡುತಿರುವನು ಪರಿತಾಪ ನಾನು ನನ್ನದು ನನ್ನವರೆನ್ನುವ ಹಲವು ತೊಡಕುಗಳ ಮೀರಿ ಧಾವಿಸಿ ಸೇರಲು ಬೃಂದಾವನವ ರಾಧೆ ತೋರುವಳು ದಾರಿ Read More