ಬಾಗಿಲೊಳು ಕೈ ಮುಗಿದು – ಕುವೆಂಪು
ಕವಿ – ಕುವೆಂಪು ಹಾಡು ಕೇಳಿ – ೧. ಶಿವಮೊಗ್ಗ ಸುಬ್ಬಣ್ಣ ೨. ರತ್ನಮಾಲಾ ಪ್ರಕಾಶ್ ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು ಧನ್ಯತೆಯ ಕುಸುಮಗಳ ಅರ್ಪಿಸಿಲ್ಲಿ ಘಂಟೆಗಳ ದನಿಯಿಲ್ಲ ಜಾಗಟೆಗಳಿಲ್ಲಿಲ್ಲ ಕರ್ಪೂರದಾರತಿಯ ಜ್ಯೋತಿಯಿಲ್ಲ ಭಗವಂತನಾನಂದ ರೂಪುಗೊಂಡಿಹುದಿಲ್ಲಿ ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ ಸರಸದಿಂದುಲಿಯುತಿದೆ ಶಿಲೆಯು ರಾಮಾಯಣವನಿಲ್ಲಿ ಬಾದರಾಯಣನಂತೆ ಭಾರತವ ಹಾಡುತಿಹುದಿಲ್ಲಿ Read More