ನನ್ನ ಬಯಕೆ – ಕುವೆಂಪು
ಕವಿ – ಕುವೆಂಪು ಹಾಡು ಕೇಳಿ ಸದ್ದಿರದ ಪಸುರುಡೆಯ ಮಲೆನಾಡ ಬನಗಳಲಿ ಮೊರೆವ ತೊರೆಯೆಡೆಯಲ್ಲಿ ಗುಡಿಸಲೊಂದಿರಲಿ. ಅಲ್ಲಿ ಗಿಳಿ ಗೊರವಂಕ ಕೋಗಿಲೆಗಳಿಂಚರವು ಕಲೆಯುತಲೆಯಲೆಯಾಗಿ ತೇಲಿ ಬರುತಿರಲಿ. ಅಲ್ಲಿ ಬಳಿ ಪಸಲೆಯಲಿ ದನಗಳಂಬಾ ಎಂಬ ದನಿಯು ದನ ಕಾಯುವನ ಕೊಳಲೊಡನೆ ಬರಲಿ. ಅಲ್ಲಿ ಸಿರಿಗನ್ನಡ ಕಬ್ಬಗಳ ಹಬ್ಬಗಳು ದಿನ ದಿನವು ಸವಿಯೂಟವಿಕ್ಕುತಿರಲೆನಗೆ. ಬಾಂದಳದಿ ಹಾರಿದರು ಬುವಿಯಲ್ಲಿ ಜಾರುತಿಹ Read More