ವೇಣಿ ಮಾಧವನ ತೋರಿಸೆ – ವಾದಿರಾಜರು
ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ ಮಂದಗಮನೆ ಎನ್ನ ಮುಂದಕೆ ಕರೆಯೆ ||೧|| ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು ಕರುಣದಿಂದೆನ್ನ ಪೊರೆಯೆ Read More