ಹರಿಕಥಾಮೃತಸಾರ – ಸರ್ವಪ್ರತೀಕ ಸಂಧಿ -10
ಶ್ರೀ ಜಗನ್ನಾಥದಾಸ ವಿರಚಿತ ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು// ಆವ ಪರಬೊಮ್ಮನ ಅತಿವಿಮಲ ಅಂಗಾವ ಬದ್ಧರು ಎಂದೆನಿಪ ರಾಜೀವಭವ ಮೊದಲಾದ ಅಮರರು ಅನುದಿನದಿ ಹರಿಪದವ ಸೇವಿಪರಿಗೆ ಅನುಕೂಲರಲ್ಲದೆ ತಾವು ಇವರನು ಕೆಡಿಸಬಲ್ಲರೆ ಶ್ರೀವಿಲಾಸಾಸ್ಪದನ ದಾಸರಿಗೆ ಉಂಟೆ ಅಪಜಯವು//1// ಶ್ರೀದನ ಅಂಘ್ರಿ ಸರೋಜಯುಗಳ ಏಕಾದಶ ಸ್ಥಾನ ಆತ್ಮದೊಳಗಿಟ್ಟು ಆದರದಿ ಸಂತುತಿಸಿ ಹಿಗ್ಗುವರಿಗೆ Read More