ಸಾವಿರಾರು ನದಿಗಳು- ಸಿದ್ಧಲಿಂಗಯ್ಯ

ನೆನ್ನೆ ದಿನನನ್ನ ಜನಬೆಟ್ಟದಂತೆ ಬಂದರುಕಪ್ಪುಮುಖ ಬೆಳ್ಳಿಗಡ್ಡ ಉರಿಯುತಿರುವ ಕಣ್ಣುಗಳುಹಗಲು ರಾತ್ರಿಗಳನು ಸೀಳಿ ನಿದ್ದೆಯನ್ನು ಒದ್ದರುಕಂಬಳಿಗಳು ಕೊರಗಿದವು ಎದ್ದೇಳುವ ರೊಚ್ಚಿಗೆಭೂಕಂಪನವಾಯಿತು ಅವರು ಕುಣಿದ ಹುಚ್ಚಿಗೆಇರುವೆಯಂತೆ ಹರಿದಸಾಲು ಹುಲಿಸಿಂಹದ ದನಿಗಳುಧಿಕ್ಕಾರ ಧಿಕ್ಕಾರ ಅಸಮಾನತೆಗೆಎಂದೆಂದಿಗು ಧಿಕ್ಕಾರ ಶ್ರೀಮಂತರ ಸೊಕ್ಕಿಗೆಲಕ್ಶಾಂತರ ನಾಗರಗಳು ಹುತ್ತಬಿಟ್ಟು ಬಂದಂತೆಊರತುಂಬ ಹರಿದರುಪಾತಾಳಕೆ ಇಳಿದರುಆಕಾಶಕೆ ನೆಗೆದರುಬೀದಿಯಲ್ಲಿ ಗಲ್ಲಿಯಲ್ಲಿಬೇಲಿಮೆಳೆಯ ಮರೆಗಳಲ್ಲಿಯಜಮಾನರ ಹಟ್ಟಿಯಲ್ಲಿ ಧಣಿಕೂರುವ ಪಟ್ಟದಲ್ಲಿಎಲ್ಲೆಲ್ಲೂ ನನ್ನ ಜನ ನೀರಿನಂತೆ ನಿಂತರುಇವರು Read More

ಯಾವ ಜನ್ಮದ ಮೈತ್ರಿ – Yava Janmada maitri – kuvempu

ರಚನೆ – ಕುವೆಂಪುಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದುನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ ! ಎಲ್ಲಿದ್ದರೇನಂತೆ ನಿನ್ನನೊಲಿಯದೆ ಮಾಣೆ,ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು!ವಿಶ್ವ ಜೀವನವೊಂದು ಪಾರವಿಲ್ಲದ ಸಿಂಧು!ಮೇಲೆ ತೆರೆನೊರೆಯೆದ್ದು ಭೋರ್ಗರೆಯುತಿರೆ ರೇಗಿ,ಅದರಂತರಾಳದಲಿ ಗುಪ್ತಗಾಮಿನಿಯಾಗಿ; ಹೃದಯಗಳು ನಲಿಯುತಿವೆ ಪ್ರೇಮ ತೀರ್ಥದಿ ಮಿಂದು!ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ;ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ?ಕುರುಡನಾದಗೆ ದಾರಿಯರ್ಥ ತಿಳಿಯಲೆ ಬೇಕೆ? ಹಾದಿ ಸಾಗಿದರಾಯ್ತು ಬರುವುದೆಲ್ಲಾ Read More

ಹಕ್ಕಿಯ ಹಾಡಿಗೆ – Hakkiya hadige taledooguva – ಕೆ. ಎಸ್. ನರಸಿಂಹ ಸ್ವಾಮಿ

ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ.ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ. ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ.ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ. ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ.ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ. ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವ ಆಸೆ.ನಾಳೆಯ ಬದುಕಿನ ಇರುಳಿನ Read More